Credits
PERFORMING ARTISTS
C. Aswath
Performer
COMPOSITION & LYRICS
C. Aswath
Composer
K.S. Narasimha Swamy
Lyrics
Lyrics
ನನ್ನವಳು ನನ್ನೆದೆಯ ಹೊನ್ನಾಡನಾಳುವಳು
ಬೆಳಗುಗೆನ್ನೆಯ ಚೆನ್ನೆ ನನ್ನ ಮಡದಿ
ನನ್ನವಳು ನನ್ನೆದೆಯ ಹೊನ್ನಾಡನಾಳುವಳು
ಬೆಳಗುಗೆನ್ನೆಯ ಚೆನ್ನೆ ನನ್ನ ಮಡದಿ
ಹೊಳೆಯ ಸುಳಿಗಳಿಗಿಂತ ಆಳಗಣ್ಣಿನ ಚೆಲುವು
ಹೊಳೆಯ ಸುಳಿಗಳಿಗಿಂತ ಆಳಗಣ್ಣಿನ ಚೆಲುವು
ಅವಳೊಮ್ಮೆ ಹೆರಳ ಕೆದರಿ ಕಪ್ಪುಗುರುಳನ್ನು
ಬೆನ್ನ ಮೇಲೆಲ್ಲ ಹರಡಿದರೆ
ದೂರದಲಿ, ಗಿರಿಯ ಮೇಲೆ ಇಳಿದಂತೆ ಇರುಳ ಮಾಲೆ
ಇಳಿದಂತೆ ಇರುಳ ಮಾಲೆ
ಕರೆದಾಗ ತೌರು ಮನೆ, ನೆನೆದಾಗ ನನ್ನ ಮನೆ
ಹಳ್ಳಿಯೆರಡರ ಮುದ್ದು ಬಳ್ಳಿ ಅವಳು
ಮುಚ್ಚು ಮರೆ ಇಲ್ಲೆದೆಯೇ ಅಚ್ಚ ಮಲ್ಲಿಗೆಯಂತೆ
ಅರಳುತಿಹುದು ಅವಳ ಬದುಕು
ಬಂಗಾರದೊಡವೆಗಳ ಬಯಸಿಲ್ಲ ಮನಸಿನಲಿ
ಬಂಗಾರದಂತ ಹುಡುಗಿ
ನನ್ನೊಡವೆ, ನನ್ನ ಬೆಡಗಿ
ನನ್ನೊಡವೆ, ನನ್ನ ಬೆಡಗಿ
ನನ್ನವಳು ನನ್ನೆದೆಯ ಹೊನ್ನಾಡನಾಳುವಳು
ಬೆಳಗುಗೆನ್ನೆಯ ಚೆನ್ನೆ ನನ್ನ ಮಡದಿ
ಹಸಿರು ಸೀರೆಯನುಟ್ಟು, ಕೆಂಪು ಬಳೆಗಳ ತೊಟ್ಟು
ತುಂಬು ದನಿಯಲಿ ಕರೆವಳೆನ್ನ ಚೆಲುವೆ
ಹಣೆಯನಾಳುವುದು ಅವಳ ಕುಂಕುಮದ ನಿಡುಬಟ್ಟು
ಲಕ್ಷ್ಮಿ ಅವಳೆನ್ನ ಮನೆಗೆ
ನಮಗಿದುವೇ ಸೊಗಸು ಬದುಕಿನ ಬಣ್ಣಗಳಾ ಸಂತೆ
ನಮಗಿಲ್ಲ ನೂರು ಚಿಂತೆ, ನಾವು ಗಂಧರ್ವರಂತೆ
ನಾವು ಗಂಧರ್ವರಂತೆ
ನನ್ನವಳು ನನ್ನೆದೆಯ ಹೊನ್ನಾಡನಾಳುವಳು
ಬೆಳಗುಗೆನ್ನೆಯ ಚೆನ್ನೆ ನನ್ನ ಮಡದಿ
ನನ್ನವಳು ನನ್ನೆದೆಯ ಹೊನ್ನಾಡನಾಳುವಳು
ಬೆಳಗುಗೆನ್ನೆಯ ಚೆನ್ನೆ ನನ್ನ ಮಡದಿ
ಬೆಳಗುಗೆನ್ನೆಯ ಚೆನ್ನೆ ನನ್ನ ಮಡದಿ
Written by: C. Aswath, K. S. Narasimha Swamy

