Lyrics
ಭಾಗ್ಯದ ಲಕ್ಷ್ಮಿ ಬಾರಮ್ಮ
ನಮ್ಮಮ್ಮ ನೀ ಸೌಭಾಗ್ಯದ ಲಕ್ಷ್ಮಿ ಬಾರಮ್ಮ
ಗೆಜ್ಜೆ ಕಾಲ್ಗಳ ಧ್ವನಿಯ ತೋರುತ
ಹೆಜ್ಜಯ ಮೇಲೆ ಹೆಜ್ಜೆಯನಿಕ್ಕುತ
ಸಜ್ಜನ ಸಾಧು ಪೂಜೆಯ ವೇಳೆಗೆ
ಮಜ್ಜಿಗೆಯೊಳಗಿನ ಬೆನ್ನಿ ಯಂತೆ
ಭಾಗ್ಯದ ಲಕ್ಷ್ಮಿ ಬಾರಮ್ಮ
ನಮ್ಮಮ್ಮ ನೀ ಸೌಭಾಗ್ಯದ ಲಕ್ಷ್ಮಿ ಬಾರಮ್ಮ
ಕನಕ ವೃಷ್ಟಿಯ ಕರೆಯುತ ಬರೆ
ಮನ ಕಾಮನಾಯ ಸಿದ್ಧಿಯ ತೊರೆ
ದಿನಕರ ಕೋಟಿ ತೇಜದಿ ಹೊಳೆವ
ಜನಕರಾಯನ ಕುಮಾರಿ ವೇದ್
ಭಾಗ್ಯದ ಲಕ್ಷ್ಮಿ ಬಾರಮ್ಮ
ನಮ್ಮಮ್ಮ ನೀ ಸೌಭಾಗ್ಯದ ಲಕ್ಷ್ಮಿ ಬಾರಮ್ಮ
ಅತ್ತಿತ್ತಲಗಳದೆ ಭಕ್ತರ ಮನೆಯಲಿ
ನಿತ್ಯ ಮಹೋತ್ಸವ ನಿತ್ಯ ಸುಮಂಗಲ
ಸತ್ಯವ ತೋರುವ ಸಾಧು ಸಜ್ಜನರ
ಸಿಟ್ಟಾಡಿ ಹೊಳೆವ ಪುತ್ತಳಿ ಬೊಂಬೆ
ಭಾಗ್ಯದ ಲಕ್ಷ್ಮಿ ಬಾರಮ್ಮ
ನಮ್ಮಮ್ಮ ನೀ ಸೌಭಾಗ್ಯದ ಲಕ್ಷ್ಮಿ ಬಾರಮ್ಮ
ಸಂಖ್ಯೆ ಇಲ್ಲದ ಭಾಗ್ಯವ ಕೊಟ್ಟು
ಕಂಕಣ ಕಯ್ಯ ತಿರುವುತ ಬರೆ
ಕುಂಕುಮಾಂಕಿತೆ ಪಂಕಜ ಲೋಚನೆ
ವೆಂಕಟರಮಣನ ಬಿಂಕದ ರಾಣಿ
ಭಾಗ್ಯದ ಲಕ್ಷ್ಮಿ ಬಾರಮ್ಮ
ನಮ್ಮಮ್ಮ ನೀ ಸೌಭಾಗ್ಯದ ಲಕ್ಷ್ಮಿ ಬಾರಮ್ಮ
ಸಕ್ಕರೆ ತುಪ್ಪದ ಕಾಲುವೆ ಹರಿಸಿ
ಶುಕ್ರವಾರದ ಪೂಜಾಯ ವೇಳಗೆ
ಅಕ್ಕರೆಯುಳ್ಳ ಅಳಗಿರಿ ರಂಗನ
ಚೊಕ್ಕ ಪುರಂದರ ವಿಠಲನ ರಾಣಿ
ಭಾಗ್ಯದ ಲಕ್ಷ್ಮಿ ಬಾರಮ್ಮ
ನಮ್ಮಮ್ಮ ನೀ ಸೌಭಾಗ್ಯದ ಲಕ್ಷ್ಮಿ ಬಾರಮ್ಮ
Written by: Purandara Dasa, Purandaradasa

