Şarkı sözleri

ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ ರಾಮ ರಾಮ ರಾಮ ರಾಮ ನೀನಿಷ್ಟದಂತೆನ್ನ ಇಟ್ಟಿರುವೆ ರಾಮ ನನ್ನಿಷ್ಟದಂತೆಲ್ಲ ಕೊಟ್ಟಿರುವೆ ರಾಮ ಕಷ್ಟಗಳ ಕೊಡಬೇಡ ಎನ್ನಲಾರೆ ರಾಮ ಕಷ್ಟ ಸಹಿಸುವ ಸಹನೆ ಕೊಡು ನನಗೆ ರಾಮ ಕಷ್ಟ ಸಹಿಸುವ ಸಹನೆ ಇನ್ನಷ್ಟು ರಾಮ ಕಷ್ಟ ಸಹಿಸುವ ಸಹನೆ ನಿನ್ನಷ್ಟು ರಾಮ ರಘುರಾಮ ರಘುರಾಮ ರಘುರಾಮ ರಾಮ ರಘುರಾಮ ರಘುರಾಮ ರಘುರಾಮ ರಾಮ ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ ರಾಮ ರಾಮ ರಾಮ ರಾಮ ಒಳಿತಿನೆಡೆ ಮುನ್ನೆಡೆವ ಮನವ ಕೊಡು ರಾಮ ಸೆಳೆತಕ್ಕೆ ಸಿಗದಂತೆ ಸ್ಥಿರತೆ ಕೊಡು ರಾಮ ನಿನ್ನೆಗಳ ಪಾಪಗಳ ಸೊನ್ನೆಯಾಗಿಸು ರಾಮ ನಾಳೆಗಳು ಪುಣ್ಯಗಳ ಹದಿಯಾಗಲಿ ರಾಮ ನನ್ನ ಬಳಿಗೆ ನಿನ್ನ ಹಸಿವ ಕೊಡು ರಾಮ ನನ್ನ ತೋಳಿಗೆ ನಿನ್ನ ಕಸುವ ಕೊಡು ರಾಮ ಕಣ್ಣು ಕಳೆದರು ನಿನ್ನ ಕನಸ ಕೊಡು ರಾಮ ನನ್ನ ಹರಣಕೆ ನಿನ್ನ ಚರಣ ಕೊಡು ರಾಮ ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ ರಾಮ ರಾಮ ರಾಮ ರಾಮ ಕೌಸಲ್ಯೆಯಾಗುವೆನು ಮಡಿಲಿಲಿರು ರಾಮ ವೈದೇಹಿಯಾಗುವೆನು ಒಡನಾಡು ರಾಮ ಪಾದುಕೆಯ ತಲೆಯಲಿಇಡು ಭರತನಾಗುವೆ ರಾಮ ಸಹವಾಸ ಕೊಡು ನಾನು ಸೌಮಿತ್ರಿ ರಾಮ ಸುಗ್ರೀವನಾಗುವೆನು ಸ್ನೇಹ ಕೊಡು ರಾಮ ಹನುಮನಾಗುವೆ ನಿನ್ನ ಸೇವೆ ಕೊಡು ರಾಮ ಹನುಮನಾಗುವೆ ನಿನ್ನ ಸೇವೆ ಕೊಡು ರಾಮ ಶಬರಿಯಾಗುವೆ ನಿನ್ನ ಭಾವ ಕೊಡು ರಾಮ ರಘುರಾಮ ರಘುರಾಮ ರಘುರಾಮ ರಾಮ ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ ರಾಮ ರಾಮ ರಾಮ ರಾಮ ಋತ ನೀನೆ ಋತು ನೀನೆ ಶೃತಿ ನೀನೆ ರಾಮ ಮತಿ ನೀನೆ ಗತಿ ನೀನೆ ದ್ಯುತಿ ನೀನೆ ರಾಮ ಆರಂಭ ಅಸ್ತಿತ್ತ್ವ ಅಂತ್ಯ ನೀ ರಾಮ ಪೂರ್ಣ ನೀ ಪ್ರಕಟ ನೀ ಆನಂದ ರಾಮ ಹರ ನೀನೆ ಹರಿ ನೀನೆ ಬ್ರಹ್ಮ ನೀ ರಾಮ ಹರ ನೀನೆ ಹರಿ ನೀನೆ ಬ್ರಹ್ಮ ನೀ ರಾಮ ಗುರಿ ನೀನೆ ಗುರು ನೀನೆ ಅರಿವು ನೀ ರಾಮ ಗುರಿ ನೀನೆ ಗುರು ನೀನೆ ಅರಿವು ನೀ ರಾಮ ರಘುರಾಮ ರಘುರಾಮ ರಘುರಾಮ ರಾಮ ನಗುರಾಮ ನಗರಾಮ ಜಗರಾಮ ರಾಮ ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ ರಾಮ ರಾಮ ರಾಮ ರಾಮ
Writer(s): Suprabha Koratigere Venkatesh, Sri Gajanana Sharma, Sri Saketha Sharma Lyrics powered by www.musixmatch.com
instagramSharePathic_arrow_out